ಪಾಟ್ನಾ,ಅ.22 (DaijiworldNews/HR): ಬಿಹಾರ ಉಪ ಮುಖ್ಯಮಂತ್ರಿ ಸುಶಿಲ್ ಮೋದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುಶಿಲ್ ಮೋದಿ, ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸ್ವಲ್ಪ ಜ್ವರ ಬಿಟ್ಟಿರೆ ಇದೆ ಅಷ್ಟೆ ಬೇರೆ ಯಾವುದೇ ಸಮಸ್ಯೆ ಇಲ್ಲ. ಚಿಕಿತ್ಸೆಗಾಗಿ ಪಾಟ್ನಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ದಾಖಲಾಗಿದ್ದೇನೆ. ಶೀಘ್ರದಲ್ಲೇ ಚುನಾವಣಾ ಪ್ರಚಾರಕ್ಕೆ ಮರಳುವುದಾಗಿ ಟ್ವೀಟ್ ಮಾಡಿದ್ದಾರೆ.