ಬಾರಾಮುಲ್ಲಾ,ಅ.22 (DaijiworldNews/HR): ಭದ್ರತಾ ಪಡೆಗಳು ಇಂದು ನಡೆಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ಅಲ್-ಬದರ್ ಉಗ್ರರು ಶರಣಾದ ಘಟನೆ ಉತ್ತರ ಕಾಶ್ಮೀರದ ಸೇಬು ಪಟ್ಟಣವಾದ ಸೊಪೋರ್ ನಲ್ಲಿ ನಡೆದಿದೆ.
ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿ ಪಡೆದುಕೊಂಡ ರಾಷ್ಟ್ರೀಯ ರೈಫಲ್ಸ್, ಜಮ್ಮು-ಕಾಶ್ಮೀರ ವಿಶೇಷ ಕಾರ್ಯಾಚರಣೆ ತಂಡ ಮತ್ತು ಸಿಆರ್ ಪಿಎಫ್ ಜಂಟಿಯಾಗಿ ಸೊಪೋರ್ ನ ತುಜ್ಜರ್ ಶರೀಫ್ ನಲ್ಲಿ ಇಂದು ಬೆಳಿಗ್ಗೆ ಶೋಧ ಕಾರ್ಯಾಚರಣೆ ಆರಂಭಿಸಿದ್ದರು.
ಇನ್ನು ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದು ಮನೆ-ಮನೆಯಲ್ಲಿ ಶೋಧ ನಡೆಸಿದ್ದರು. ಈ ವೇಳೆ, ಅಲ್ ಬದರ್ ನ ಇಬ್ಬರು ಉಗ್ರರ ಕುಟುಂಬದವರು ಶರಣಾಗುವಂತೆ ಅವರ ಮನವೊಲಿಸಿದ್ದಾರೆ ಎಂದು ತಿಳಿದು ಬಂದಿದೆ.