ಬೆಂಗಳೂರು, ಅ. 22 (DaijiworldNews/MB) : ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟಿ ಸಂಜನಾ ಗಲ್ರಾನಿ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಮತ್ತೆ ಮುಂದೂಡಿದೆ.
ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ಈ ಅರ್ಜಿ ವಿಚಾರಣೆಯನ್ನು ಅ.24ಕ್ಕೆ ಮುಂದೂಡಿ ಆದೇಶ ಹೊರಡಿಸಿದರು.
ಇನ್ನು ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಹಷ್ಮತ್ ಪಾಷಾ ಅವರು, ಸಂಜನಾ ಬಳಿಯಿಂದ ಪೊಲೀಸರು ಯಾವುದೇ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿಲ್ಲ. ಇಂತಹ ಪ್ರಕರಣದಲ್ಲಿ ಮುಂಬೈ ಹೈಕೋರ್ಟ್ ನಟಿ ರಿಯಾ ಅವರಿಗೆ ಜಾಮೀನು ನೀಡಿದೆ. ಸಂಜನಾ ಅವರಿಗೂ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠ ಈ ಅರ್ಜಿ ವಿಚಾರಣೆಯನ್ನು ಅ.24ಕ್ಕೆ ಮುಂದೂಡಿದೆ.