ನವದೆಹಲಿ, ಅ.23 (DaijiworldNews/PY): ಮುಂದಿನ ವರ್ಷದಿಂದ ಜಂಟಿ ಪ್ರವೇಶ ಪರೀಕ್ಷೆ(ಜೆಇಇ)ಯನ್ನು ಹೆಚ್ಚು ಪ್ರಾದೇಶಿಕ ಭಾಷೆಗಳಲ್ಲಿ ಆಯೋಜಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿದ್ದಾರೆ.
ಜಂಟಿ ಪ್ರವೇಶ ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಜಂಟಿ ಪ್ರವೇಶ ಮಂಡಳಿ ತೀರ್ಮಾನ ಮಾಡಿದ್ದು, ಇದು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020ಕ್ಕೆ ಅನುಗುಣವಾಗಿದೆ ಎಂದಿದ್ದಾರೆ.
ಮುಂದಿನ ವರ್ಷದಿಂದ ಅಧಿಕ ಪ್ರಾದೇಶಿಕ ಭಾಷೆಗಳಲ್ಲಿ ಜೆಇಇ ಪರೀಕ್ಷೆಯನ್ನು ನಡೆಸಲು ನೂತನ ಶಿಕ್ಷಣ ನೀತಿ-2020ರಡಿಯಲ್ಲಿ ಜಂಟಿ ಪ್ರವೇಶ ಮಂಡಳಿ(ಜೆಎಬಿ) ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಮುಂದಿನ ವರ್ಷದಿಂದ ಪ್ರಾದೇಶಿಕ ಭಾಷೆಗಳಲ್ಲಿ ಜೆಇಇ ಪರೀಕ್ಷೆಗಳನ್ನು ನಡೆಸಿ ಪರೀಕ್ಷೆಯ ಆಧಾರದ ಮೇಲೆ ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕೆ ತೀರ್ಮಾನ ಮಾಡಲಾಗುತ್ತದೆ. ಅಲ್ಲದೇ, ಜೆಇಇ ಆಧಾರದ ಮೇಲೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಆಯಾ ರಾಜ್ಯದ ಭಾಷೆಯನ್ನು ಕೂಡಾ ಇದರಲ್ಲಿ ಸೇರ್ಪಡೆ ಮಾಡಲಾಗುತ್ತದ ಎಂದಿದ್ದಾರೆ.