ನವದೆಹಲಿ,ಅ. 23 (DaijiworldNews/HR): ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ನ ರೈತರಿಗಾಗಿ ಕಿಸಾನ್ ಸೂರ್ಯೋದಯ ಯೋಜನೆ ಸೇರಿದಂತೆ ಪ್ರಮುಖ ಮೂರು ಯೋಜನೆಗಳನ್ನು ಅ 24 ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ.
ಪ್ರಧಾನಿ, ಕಿಸಾನ್ ಸೂರ್ಯೋದಯ ಯೋಜನೆ, ಯು ಎನ್ ಮೆಹ್ತಾ ಹೃದ್ರೋಗ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ಮಕ್ಕಳ ಹೃದಯ ಚಿಕಿತ್ಸಾ ಆಸ್ಪತ್ರೆ ಹಾಗೂ ಅಹಮದಾಬಾದ್ ಸರ್ಕಾರಿ ಆಸ್ಪತ್ರೆಯ ಸರ್ಕಾರಿ ಆಸ್ಪತ್ರೆಯಲ್ಲಿ ಟೆಲಿ-ಹೃದ್ರೋಗ ಮೊಬೈಲ್ ಅಪ್ಲಿಕೇಶನ್ ಅನ್ನು ಉದ್ಘಾಟಿಸಲಿದ್ದಾರೆ.
ಕಿಸಾನ್ ಸೂರ್ಯೋದಯ ಯೋಜನೆಯಡಿ ರೈತರ ಜಮೀನುಗಳಿಗೆ ಬೆಳಿಗ್ಗೆ 5 ರಿಂದ ರಾತ್ರಿ 9 ರವರೆಗೆ ವಿದ್ಯುತ್ ಸರಬರಾಜು ಮಾಡಲಾಗುತ್ತದೆ.
ಇನ್ನು ಯು ಎನ್ ಮೆಹ್ತಾ ಸಂಸ್ಥೆ ಇದೀಗ ಹೃದಯಶಾಸ್ತ್ರದ ಭಾರತದ ಅತ್ಯಂತ ದೊಡ್ಡ ಆಸ್ಪತ್ರೆಯಾಗಲಿದ್ದು, ವಿಶ್ವದರ್ಜೆಯ ವೈದ್ಯಕೀಯ ಮೂಲಸೌಕರ್ಯ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಹೊಂದಿರುವ ವಿಶ್ವದ ಕೆಲವೇ ಆಸ್ಪತ್ರೆಗಳಲ್ಲಿ ಇದು ಕೂಡ ಒಂದಾಗಲಿದೆ ಎಂದು ತಿಳಿದು ಬಂದಿದೆ.