ಹೊಸದಿಲ್ಲಿ, ಅ. 23 (DaijiworldNews/HR): ಮಾನವ ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿ(83) ಎಲ್ಗರ್ ಪರಿಷತ್ ಪ್ರಕರಣದಲ್ಲಿ ಬಂಧಿತರಾಗಿದ್ದು, ಅವರು ಸಲ್ಲಿಸಿರುವ ಮಧ್ಯಂತರ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.
ಸ್ಟ್ಯಾನ್ ಸ್ವಾಮಿ ಅವರನ್ನು ಜಾರ್ಖಂಡ್ನ ರಾಂಚಿಯಿಂದ ಅಕ್ಟೋಬರ್ 8ರಂದು ಬಂಧಿಸಿದ್ದ ಎನ್ಐಎ ಮರುದಿನ ಅವರನ್ನು ಮುಂಬೈಗೆ ಕರೆದೊಯ್ಯಲಾಗಿತ್ತು. ಆದರೆ ಕೊರೊನಾ ರೋಗವನ್ನು ಗಮನದಲ್ಲಿಟ್ಟುಕೊಂಡು ಮಧ್ಯಂತರ ಜಾಮೀನು ಕೋರಿ ಸ್ವಾಮಿ ಅವರು ಅರ್ಜಿ ಸಲ್ಲಿಸಿದ್ದರು.
ಇನ್ನು ಸ್ಟ್ಯಾನ್ ಸ್ವಾಮಿ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದು, ಅವರಿಗೆ ಸಹಿ ಹಾಕಲು ಸಾಧ್ಯವಾಗಿಲ್ಲ, ಹಾಗಾಗಿ ಅವರ ಹೆಬ್ಬೆರಳು ಗುರುತು ಪಡೆಯಲಾಗಿದೆ ಎಂದು ಸ್ವಾಮಿ ಪರ ವಕೀಲರಾದ ಶರೀಫ್ ಶೇಖ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.