ತುಮಕೂರು, ಅ.23 (DaijiworldNews/PY): ಕೈ ಪಕ್ಷದಲ್ಲಿ ಹೊಂದಾಣಿಕೆಯ ಕೊರತೆ ಇದೆ. ಅವರ ಪಕ್ಷದಲ್ಲಿ ಈ ರೀತಿಯಿದ್ದು, ಬಿಜೆಪಿಯನ್ನು ಟೀಕೆ ಮಾಡುತ್ತಾರೆ. ಅವರದ್ದು, ತಾನು ಕಳ್ಳ ಪರರ ನಂಬ ಎನ್ನುವಂತ ಸ್ಥಿತಿ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಬಣಗಳಿವೆ. ಅವರ ನಡುವೆ ಹೊಂದಾಣಿಕೆಯಿಲ್ಲ. ಹೀಗಿರುವಾಗ ಅವರು ಬಿಜೆಪಿಯನ್ನು ಟೀಕಿಸುತ್ತಿದ್ದಾರೆ ಎಂದಿದ್ದಾರೆ.
ಬಸವನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಯತ್ನಾಳ ಅವರು ಹೇಳಿರುವ ಹೇಳಿಕೆ ಅದು ಅವರ ವೈಯುಕ್ತಿಕ. ಈ ಬಗ್ಗೆ ನಾನೇನೂ ಹೇಳುವದಿಲ್ಲ. ಬಿ.ಎಸ್.ಯಡಿಯೂರಪ್ಪ ಅವರೇ ಮುಂದಿನ ಮೂರು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ತಿಳಿಸಿದ್ದಾರೆ.
ಸಾರಿಗೆ ಇಲಾಖೆಯ ಬಗ್ಗೆ ಮಾತನಾಡಿದ ಅವರು, ನಿಗಮಗಳ ನಾಲ್ಕು ಬಸ್ಗಳಲ್ಲಿ ಪ್ರತಿನಿತ್ಯ ಎರಡು ಕೋಟಿ ಪ್ರಯಾಣಿಕರು ಸಂಚರಿಸುತ್ತಿದ್ದರು. ಪ್ರಸ್ತುತ ಶೇ.30ರಷ್ಟು ಮಂದಿ ಮಾತ್ರವೇ ಪ್ರಯಾಣಿಸುತ್ತಿದ್ದಾರೆ. ಸದ್ಯ ನೌಕರರಿಗೆ ವೇತನ ನೀಡಲು ಹಣ ಇಲ್ಲದ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಿದ್ದಾರೆ.