ಭೋಪಾಲ್, ಅ. 23 (DaijiworldNews/HR): ಮಧ್ಯಪ್ರದೇಶದಲ್ಲಿ ನೀಟ್ ಪರೀಕ್ಷೆಯ ಫಲಿತಾಂಶ ಯಡವಟ್ಟಿನಿಂದಾಗಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮಧ್ಯಪ್ರದೇಶದ ವಿಧಿ ಸೂರ್ಯವಂಶಿ ಎಂಬ ವಿದ್ಯಾರ್ಥಿನಿ ತಾನು ಮುಂದೆ ವೈದ್ಯಳಾಗಬೇಕೆಂಬ ಕನಸು ಕಟ್ಟಿಕೊಂಡು ನೀಟ್ ಫಲಿತಾಂಶವನ್ನು ಕಾಯುತ್ತಿದ್ದು, ಫಲಿತಾಂಶದ ಪಟ್ಟಿಯಲ್ಲಿ ಪರೀಕ್ಷಿಸಿದಾಗ ತನ್ನ ಹೆಸರಿನ ಮುಂದೆ ಕೇವಲ 6 ಸಂಖ್ಯೆಗಳ ಫಲಿತಾಂಶ ಮಾತ್ರ ಇದ್ದಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದಳು ಎಂಬುದಾಗಿ ತಿಳಿದು ಬಂದಿದೆ.
ಇನ್ನು ವಿಧಿ ಸೂರ್ಯವಂಶಿ ನೀಟ್ ಪರೀಕ್ಷೆಯ ಉತ್ತರಪತ್ರಿಕೆಯ ಪ್ರತಿಯನ್ನು ಪರಿಶೀಲಿಸಿದಾಗ ಆಕೆ ನಿಜಕ್ಕೂ ಅತ್ಯುತ್ತಮ ಅಂಕ(590) ಪಡೆದಿದ್ದಳು. ಆದರೆ ವಿದ್ಯಾರ್ಥಿನಿ ದುಡುಕಿನ ನಿರ್ಧಾರ ಕೈಗೊಂಡು ಆತ್ಮಹತ್ಯೆಗೆ ಶರಣಾಗಿದ್ದಳು.
ಮಾನಸಿಕ ಆಘಾತಕ್ಕೊಳಗಾಗಿದ್ದ ವಿಧಿ ಸೂರ್ಯವಂಶಿ ತನ್ನ ಕೋಣೆಯಲ್ಲಿರುವ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಆಕೆಯ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವುದಾಗಿ ವರದಿ ತಿಳಿಸಿದೆ.