ರಾಯಚೂರು, ಅ. 23 (DaijiworldNews/MB) : ಸಂಕಷ್ಟದಲ್ಲಿರುವ ರೈತರ ಸಹಾಯಕ್ಕೆ ನೆರವಿಗೆ ಧಾವಿಸದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ದೇಣಿಗೆ ಸಂಗ್ರಹಿಸುವ ಮೂಲಕ ವಿನೂತನವಾಗಿ ಪ್ರತಿಭಟನೆಯನ್ನು ರಾಯಚೂರಿನ ತೀನ್ ಕಂದಿಲ್ ಬಳಿ ನಡೆಸಿದರು.
ತೀನ್ ಕಂದಿಲ್ ಪ್ರದೇಶದಿಂದ ಪಟೇಲ್ ರಸ್ತೆ, ಚಂದ್ರಮೌಳೇಶ್ವರ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಯವರೆಗೂ ಪ್ರತಿಭಟನಾ ರ್ಯಾಲಿಯನ್ನು ನಡೆಸಿದ್ದು ಜೋಳಿಗೆ ಹಿಡಿದು ದೇಣಿಗೆಗೆ ಭಿಕ್ಷೆ ಬೇಡುತ್ತಾ ಸರ್ಕಾರದ ವಿರುದ್ದ ಘೋಷಣೆ ಕೂಗಿದರು.
ಬೆಳೆ ಹಾನಿ ಪರಿಹಾರ, ಬೆಳೆ ವಿಮೆ ಸೇರಿದಂತೆ ರೈತರಿಗರ ಯಾವ ಪರಿಹಾರವನ್ನು ಸರ್ಕಾರ ನೀಡಿಲ್ಲ. ರೈತರು ಪ್ರವಾಹದಿಂದಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆದರೆ ಸರ್ಕಾರ ರೈತವ ವಿರೋಧಿಯಾಗಿದೆ ಎಂದು ಸರ್ಕಾರದ ವಿರುದ್ದ ಪ್ರತಿಭಟನಾಕಾರರು ವಾಗ್ದಾಳಿ ನಡೆಸಿದರು.
ಈ ಪ್ರತಿಭಟನಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೂರಾರು ಕಾರ್ಯಕರ್ತರು ಭಾಗಿಯಾದರು.