ನವದೆಹಲಿ, ಅ. 23 (DaijiworldNews/HR): ಭಾರತದ 1 ಸಾವಿರ ಚದರ ಕಿ. ಮೀ ಭೂ ಭಾಗವನ್ನು ಚೀನಾ ಆಕ್ರಮಿಸಿರುವುದು ಸತ್ಯವಾಗಿದ್ದು, ಭಾರತವು ಸುಮಾರು 40 ಕಿಲೋ ಮೀಟರ್ ಭೂ ಭಾಗವನ್ನು ಮರಳಿ ಪಡೆದುಕೊಂಡಿದೆ ಎಂಬುದಾಗಿ ಪಿಡಿಪಿ ಮುಖಂಡೆ ಮೆಹಬೂಬಾ ಮುಪ್ತಿ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೆಹಬೂಬಾ ಮುಪ್ತಿ, ಚೀನಾ ದೇಶವು ವಿವಾದಿತ ಪ್ರದೇಶವಾಗಿದ್ದು, ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿರುವುದರ ಬಗ್ಗೆ ಪ್ರಶ್ನಿಸಿದ್ದಾರೆ. ಆದರೆ, ವಿಶೇಷ ಸ್ಥಾನಮಾನ ರದ್ದುಗೊಳ್ಳುವವರೆಗೂ ಜಮ್ಮು-ಕಾಶ್ಮೀರ ವಿಚಾರವನ್ನು ಅಂತಾರಾಷ್ಟ್ರೀಯ ದೃಷ್ಟಿಕೋನದಲ್ಲಿ ನೋಡಿರಲಿಲ್ಲ ಎಂದು ಹೇಳಿದ್ದಾರೆ.
ಇನ್ನು ಸಂವಿಧಾನದ 370 ನೇ ವಿಧಿ ರದ್ದು ಮಾಡಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮುಫ್ತಿ, ಸಂವಿಧಾನವನ್ನು ಅಪವಿತ್ರಗೊಳಿಸಲಾಗಿದ್ದು, ಬಿಜೆಪಿಗೆ ಚುನಾವಣೆಯಲ್ಲಿ ಮತ ಕೇಳುವ ಅಧಿಕಾರ ಇಲ್ಲ ಎಂದರು.