ಮುಂಬೈ, ಅ. 24 (DaijiworldNews/MB) : ಮಹಾರಾಷ್ಟ್ರದ ರೈತರು ಸೇರಿದಂತೆ ರಾಜ್ಯದ ಪ್ರವಾಹ ಪೀಡಿತ ಜನರಿಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು10,000 ಕೋಟಿ ರೂ. ನೆರವು ಘೋಷಿಸಿದ್ದಾರೆ.
ಮಹಾ ವಿಕಾಸ್ ಅಘಾಡಿ(ಎಂವಿಎ)ಯ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಬಳಿ ಮಾಧ್ಯಮದೊಂದಿಗೆ ಮಾತನಾಡಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಈ ಬಗ್ಗೆ ತಿಳಿಸಿದ್ದಾರೆ.
ದೀಪಾವಳಿ ಹಿನ್ನೆಲೆಯಲ್ಲಿ ಎಂವಿಎ ಸರ್ಕಾರ ಪ್ರವಾಹ ಪೀಡಿತ ಜನರಿಗೆ 10,000 ಕೋಟಿ ರೂ. ಪ್ರವಾಹ ನೆರವು ನೀಡಲಿದೆ. ಇನ್ನೂ 38,000 ಕೋಟಿ ರೂಪಾಯಿಯನ್ನು ಕೇಂದ್ರ ದಿಂದ ಪಡೆಯಬೇಕಾಗಿದೆ. ನಾವು 10,000 ಕೋಟಿ ರೂಪಾಯಿಗಳ ಸಹಾಯವನ್ನು ನೀಡುತ್ತೇವೆ ಅದನ್ನು ವಿವಿಧ ಉದ್ದೇಶಗಳಿಗಾಗಿ ಬಳಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಕಳೆದ ವಾರ ಸುರಿದ ತೀವ್ರ ಮಳೆಯಿಂದಾಗಿ ಪುಣೆ, ಔರಂಗಾಬಾದ್ ಮತ್ತು ಕೊಂಕಣ ವಿಭಾಗಗಳಲ್ಲಿ ಹಲವು ಮಂದಿ ಸಾವನ್ನಪ್ಪಿದ್ದಾರೆ. ಒಂದು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆಗೆ ಹಾನಿ ಉಂಟಾಗಿದೆ.