ಬೆಂಗಳೂರು, ಅ. 24 (DaijiworldNews/HR): ಮತದಾರರ ಪಟ್ಟಿಯಿಂದ ಯಾರಿಗೂ ಗೊತ್ತಿಲ್ಲದಂತೆ ರಹಸ್ಯವಾಗಿ ಒಂದು ಸಮುದಾಯಕ್ಕೆ ಸೇರಿದ ಮತದಾರರ ಹೆಸರನ್ನು ತೆಗೆದು ಹಾಕಲಾಗಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಈ ಕುರಿತು ರಾಜರಾಜೇಶ್ವರಿ ನಗರದ ಒಕ್ಕಲಿಗಾ ಸಮುದಾಯದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂಸತ್ ಚುನಾವಣೆಯ ಸಂಧರ್ಭದಲ್ಲಿ ಬೆಂಗಳೂರು ದಕ್ಷಿಣ ಭಾಗದಲ್ಲಿ ಕೆಲವು ಸಮುದಾಯಗಳ ಸದಸ್ಯರ 30,000 ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿತ್ತು. ಆಗ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕೃಷ್ಣ ಬೈರೇಗೌಡ ಇಂತಹದೆ ಆರೋಪ ಮಾಡಿದ್ದರು ಎಂದರು.
ಇನ್ನು ಆರ್ ಆರ್ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರ ಚುನಾವಣಾ ಪ್ರಚಾರದ ಸಂಧರ್ಭದಲ್ಲಿ ಡಿಕೆ ರವಿ ಪತ್ನಿ ಕಸುಮಾ ಅವರು ತಮ್ಮ ಪತಿಯ ಹೆಸರನ್ನು ಬಳಸುವುದಕ್ಕೆ ಬಿಜೆಪಿ ಸಂಸದ ಶೋಭಾ ಕರಂದ್ಲಾಜೆ ಆಕ್ಷೇಪ ವ್ಯಕ್ತಪಡಿಸಿಕ್ಕೆ ಪ್ರತ್ರಿಕ್ರಿಯಿಸಿದ ಡಿಕೆಶಿ, ಐಎಎಸ್ ಅಧಿಕಾರಿಯಾಗಿದ್ದ ರವಿಯವರನ್ನು ಕುಸುಮಾ ಅವರು ವಿವಾಹವಾಗಿದ್ದು, ಅವರ ಪತಿಯ ಹೆಸರನ್ನು ಬಳಕೆ ಮಾಡಿಕೊಳ್ಳುವ ಎಲ್ಲಾ ಹಕ್ಕು ಕುಸುಮಾ ಅವರಿಗಿದೆ ಎಂಬುದಾಗಿ ಹೇಳಿದ್ದಾರೆ.