ಮುಂಬೈ,ಅ. 24 (DaijiworldNews/HR): ಗುರುವಾರ ರಾತ್ರಿ ಮುಂಬೈ ಸಿಟಿ ಸೆಂಟರ್ ಮಾಲ್ನಲ್ಲಿ ಕಾಣಿಸಿಕೊಂಡ ಬೆಂಕಿ 36 ಗಂಟೆ ಕಳೆದರು ಆರದ ಕಾರಣ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ 18 ಅಗ್ನಿಶಾಮಕ ಯಂತ್ರ ಮತ್ತು 10 ಜಂಬೋ ಟ್ಯಾಂಕರ್ಗಳನ್ನು ಬಳಸಲಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಾಲ್ ಪಕ್ಕದ ಕಟ್ಟಡದಿಂದ ಸುಮಾರು 3500 ಜನರನ್ನು ಸ್ಥಳಾಂತರಿಸಲಾಗಿದೆ.
ಇನ್ನು ಬೆಂಕಿ ನಂದಿಸುವ ಕಾರ್ಯಾಚರಣೆ ವೇಳೆ ಅಗ್ನಿಶಾಮಕ ದಳದ ಐವರು ಸಿಬ್ಬಂದಿಗೆ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಇದೀಗ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಮಹಾರಾಷ್ಟ್ರ ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ ಭೇಟಿ ನೀಡಿ, ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.