ಬೆಂಗಳೂರು,ಅ. 24 (DaijiworldNews/HR): ವಿಧಾನಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಿ.ಟಿ.ಶ್ರೀನಿವಾಸ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಆದೇಶದ ಮೇರೆಗೆ , ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ, ಪಕ್ಷ ಸೂಚನೆ ಕೊಟ್ಟರೂ ಉಲ್ಲಂಘಿಸಿದ್ದಾರೆ ಎನ್ನುವ ಕಾರಣಕ್ಕೆ ಉಚ್ಛಾಟನೆ ಮಾಡಲಾಗಿದೆ.
ಇನ್ನು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಶ್ರೀನಿವಾಸ್ ಅವರು ಕಣದಿಂದ ಹಿಂದಕ್ಕೆ ಸರಿಯುವಂತೆ ಬಿಜೆಪಿ ಪಕ್ಷ ತಿಳಿಸಿದ್ದರೂ ಅದನ್ನು ಕಡೆಗಣಿಸಿದ ಕಾರಣ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.