ಬಿಹಾರ, ಅ. 25 (DaijiworldNews/HR): ಬಿಹಾರ ಚುನಾವಣೆಗೆ ಶಿಯೋಹರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸ್ವತಂತ್ರ ಅಭ್ಯರ್ಥಿ ನಾರಾಯಣ್ ಸಿಂಗ್ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿಯೋಹರ್ನಲ್ಲಿ ಪ್ರಚಾರ ನಡೆಸುತ್ತಿದ್ದ ಸಂಧರ್ಭದಲ್ಲಿ ನಡೆದಿದೆ.
ನಾರಾಯಣ್ ಸಿಂಗ್ ಮೇಲೆ ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಏಕಾಏಕಿ ಗುಂಡು ಹಾರಿಸಿದ ಪರಿಣಾಮ ಸಿಂಗ್ ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಜೊತೆಗಿದ್ದ ಇಬ್ಬರು ಸಹಚರರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಾಯಿಸಲಾಗಿದು, ಅದರಲ್ಲಿ ಸಂತೋಷ್ ಕುಮಾರ್ ಎಂಬಾತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಈ ಕುರಿತು ಇನ್ನೊರ್ವ ಗಾಯಾಳು ಅಭಯ್ ಕುಮಾರ್ ಪ್ರತಿಕ್ರಿಯೆ ನೀಡಿ, ನಾರಾಯಣ್ ಸಿಂಗ್ ಪ್ರಚಾರ ನಡೆಸುತ್ತಿದ್ದ ವೇಳೆಯಲ್ಲಿ ಸುಮಾರು 8 ರಿಂದ 10 ಮಂದಿ ಇದ್ದ ದುಷ್ಕರ್ಮಿಗಳ ತಂಡ, ಜನರ ಮಧ್ಯೆಯೇ ಗುಂಡಿನ ದಾಳಿ ನಡೆಸಿದೆ. ನಾರಾಯಣ್ ಸಿಂಗ್ ಅವರನ್ನು ಉಳಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.