ನವದೆಹಲಿ, ಅ.26 (DaijiworldNews/PY): ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಭಾನುವಾರ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಈ ಬಗ್ಗೆ ನಿನ್ನೆ ಟ್ವೀಟ್ ಮೂಲಕ ತಿಳಿಸಿರುವ ಅವರು, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ನಾನು ಆರೋಗ್ಯವಾಗಿದ್ದೇನೆ. ಇತ್ತೀಚಿನ ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.
ನಾನು ಹೋಂ ಕ್ವಾರಂಟೈನ್ ಮೂಲಕ ಕಚೇರಿಯ ಕೆಲಸಗಳನ್ನು ಮುಂದುವರೆಸಲಿದ್ದೇನೆ. ದೂರವಾಣಿ ಹಾಗೂ ವಿಡಿಯೋ ಕಾಲಿಂಗ್ ಮುಖೇನ ನಾನು ಅಧಿಕಾರಿಗಳ ಸಂಪರ್ಕದಲ್ಲಿದ್ದೇನೆ ಎಂದಿದ್ದಾರೆ.