ಪಾಟ್ನಾ, ಅ. 26 (DaijiworldNews/HR): ಬಿಹಾರದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಲೋಕ ಜನಶಕ್ತಿ ಪಕ್ಷ ಅಧಿಕಾರ ಬಂದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಲೋಕ ಜನಶಕ್ತಿ ಪಕ್ಷದ ಮುಖಂಡ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.
ಈ ಕುರಿತು ಬಿಹಾರದ ಬಕ್ಸರ್ ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಚಿರಾಗ್ , ಬಿಹಾರದಲ್ಲಿ ಮದ್ಯನಿಷೇಧ ವಿಫಲವಾಗಿದ್ದರು, ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡಲಾಗುತ್ತಿದೆ. ಇದರಿಂದ ನಿತೀಶ್ ಕುಮಾರ್ ಕಿಕ್ಬ್ಯಾಕ್ ಪಡೆಯುತ್ತಿದ್ದಾರೆ ಎಂದರು.
ಇನ್ನು ಚಿರಾಗ್ ಪಾಸ್ವಾನ್ ಪ್ರಧಾನಿ ನರೇಂದ್ರ ಮೋದಿಯವರನ್ನು ಹನುಮಾನ್ ಎಂದು ಕರೆದಿದ್ದು ಈ ಮೂಲಕ ಬಿಜೆಪಿಗೆ ಬೆಂಬಲ ನೀಡಿದ್ದಾರೆ.
ಬಿಹಾರದಲ್ಲಿ ಅಕ್ಟೋಬರ್ 28ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ಒಟ್ಟು ಮೂರು ಹಂತದಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 10ರಂದು ಮತಎಣಿಕೆ ನಡೆಯಲಿದೆ.