ಮುಂಬೈ,ಅ. 26 (DaijiworldNews/HR): ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಉಪ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದ್ದು, ಅಜಿತ್ ಪವಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮುಂಬೈ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಎಂಬುದಾಗಿ ತಿಳಿಸಿದೆ.
ಅಜಿತ್ ಪವಾರ್ ಪ್ರವಾಹ ಪೀಡಿದ ಪ್ರದೇಶಗಳಾದ ಪುಣೆ ಹಾಗೂ ಸೊಲ್ಲಾಪುರ ಜಿಲ್ಲೆಗೆ ಕೆಲ ದಿನಗಳ ಹಿಂದಷ್ಟೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅದಾದ ಬಳಿಕ ಅವರಲ್ಲಿ ಜ್ವರ ಹಾಗೂ ಕೆಲ ಲಕ್ಷಣಗಳು ಕಾಣಿಸಿಕೊಂಡಿತ್ತು. ಬಳಿಕ ಕೊರೊನಾ ಪರೀಕ್ಷೆ ಮಾಡಿದಾಗ ನೆಗೆಟಿವ್ ಬಂದಿತ್ತು. ನಂತರ ಅಜಿತ್ ಅವರು ಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ್ ನಲ್ಲಿರುವುದಾಗಿ ತಿಳಿಸಿದ್ದರು. ಇದೀಗ ಮತ್ತೆ ಅಜಿತ್ ಅವರನ್ನು ಪರೀಕ್ಷೆಗೊಳಪಡಿಸಲಾಗಿದ್ದು, ವೈದ್ಯಕೀಯ ವರದಿಯಲ್ಲಿ ಸೋಂಕು ತಗುಲಿದೆ ಎಂದು ತಿಳಿದುಬಂದಿದೆ.