ನವದೆಹಲಿ, ಅ.26 (DaijiworldNews/PY): 1999ರ ಕಲ್ಲಿದ್ದಲು ಹಗರಣ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಮೂರು ವರ್ಷಗಳ ಜೈಲುಶಿಕ್ಷೆ ವಿಧಿಸಿದೆ.
ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮ ಎಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ದಿಲೀಪ್ ರೇ ಅವರಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಮತ್ತೆ ಇಬ್ಬರು ಅಪರಾಧಿಗಳು ಎಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು.
ಅಟಲ್ ಬಿಹಾರಿ ವಾಜಪೇಯಿಯವರ ಸರ್ಕಾರದಲ್ಲಿ ರಾಜ್ಯ ಸಚಿವ (ಕಲ್ಲಿದ್ದಲು) ಆಗಿ ಸೇವೆ ಸಲ್ಲಿಸಿದ್ದ ದಿಲೀಪ್ ರೇ ಅವರು ಕ್ರಿಮಿನಲ್ ಸಂಚು ಹಾಗೂ ಇತರ ಆರೋಪಗಳನ್ನು ಎಸಗಿರುವ ಆರೋಪದಡಿ ಇವರನ್ನು ದೋಷಿ ಎಂದು ಕೋರ್ಟ್ ಆದೇಶ ನೀಡಿತ್ತು.
ವಿಶೇಷ ನ್ಯಾಯಮೂರ್ತಿ ಭಾರತ್ ಪರಾಶರ್ ಅವರು ಪ್ರಕರಣದ ವಿಚಾರಣೆ ನಡೆಸಿದ್ದು, ಅಕ್ಟೋಬರ್ 26ಕ್ಕೆ ಶಿಕ್ಷೆಯನ್ನು ಪ್ರಕಟಿಸುವುದಾಗಿ ತಿಳಿಸಿದ್ದರು.