ಪಾಟ್ನಾ, ಅ.26 (DaijiworldNews/PY): ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರ ವಿರುದ್ದ ವಾಗ್ದಾಳಿ ನಡೆಸಿರುವ ಬಿಜೆಪಿ ನಾಯಕ ಮನೋಜ್ ತಿವಾರಿ, ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡುವುದು ಆಯಾ ರಾಜ್ಯಗಳಿಗೆ ಬಿಟ್ಟ ವಿಚಾರವಾಗಿದೆ ಎಂದಿದ್ದಾರೆ.
ಉದ್ದವ್ ಠಾಕ್ರೆ ಅವರಿಗೆ ಬಿಜೆಪಿಯನ್ನು ದೂರುವ ಬದಲು ಮಹಾರಾಷ್ಟ್ರದಲ್ಲಿ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡುತ್ತೇವೆ ಎಂದು ಏಕೆ ಹೇಳುತ್ತಿಲ್ಲ?. ಈ ವಿಚಾರ ಕೇವಲ ರಾಜ್ಯ ಸಂಬಂಧಪಟ್ಟ ವಿಷಯವಾಗಿದೆ. ಎಂದು ಹೇಳಿದ್ದಾರೆ.
ಪ್ರಸ್ತುತ ಬಿಹಾರದಲ್ಲಿ ಚುನಾವಣೆಗಳು ನಡೆಯುತ್ತಿವೆ. ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಕೊರೊನಾ ಉಚಿತ ಲಸಕೆ ನೀಡುತ್ತದೆ ಎಂದಿದ್ದಾರೆ.
ಉದ್ದವ್ ಠಾಕ್ರೆ ಅವರು ಮುಂಬೈನಲ್ಲಿ ನಡೆದ ಶಿವಸೇನೆಯ ವಾರ್ಷಿಕ ದಸರಾ ಸಮಾರಂಭದಲ್ಲಿ ಮಾತನಾಡುವ ಸಂದರ್ಭ ಹಲವು ವಿಚಾರಗಳ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ.
ಮುಂಬೈನಲ್ಲಿ ನಡೆದ ಶಿವಸೇನೆಯ ವಾರ್ಷಿಕ ದಸರಾ ಸಮಾರಂಭದಲ್ಲಿ ಮಾತನಾಡುವಾಗ ಠಾಕ್ರೆ ಹಲವಾರು ವಿಷಯಗಳ ಕುರಿತು ಬಿಜೆಪಿಯ ಮೇಲೆ ದಾಳಿ ನಡೆಸಿದ್ದರು.