ಹುಬ್ಬಳ್ಳಿ, ಅ.26 (DaijiworldNews/PY): ಬಿ.ಎಸ್.ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಖಾಲಿ ಇಲ್ಲದ ಸಿಎಂ ಹುದ್ದೆಗಾಗಿ ಕಾಂಗ್ರೆಸ್ಸಿಗರು ಪೈಪೋಟಿ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ. ಇನ್ನು ಸಿಎಂ ಬದಲಾವಣೆಯ ಬಗ್ಗೆ ಯಾವುದೇ ಪಕ್ಷದವರು ಏನೇ ಹೇಳಿದರೂ ಕೂಡಾ ಅದನ್ನು ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದರು.
ಕಾಂಗ್ರೆಸ್ಸಿಗರು ಸುಖಾ ಸುಮ್ಮನೆ ಸಿಎಂ ಬಿಎಸ್ವೈ ಹಾಗೂ ಪ್ರಧಾನಿ ಮೋದಿ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಖಾಲಿ ಇಲ್ಲದ ಸಿಎಂ ಹುದ್ದೆಯ ಬಗ್ಗೆ ಮಾತಾನಾಡುತ್ತಿದ್ದರೆ, ಇನ್ನೊಂದೆಡೆ ರಾಹುಲ್ ಗಾಂಧಿ ಅವರು ಹಾಸಾಸ್ಪದವಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು.