ಶ್ರೀನಗರ,ಅ. 26 (DaijiworldNews/HR): ಕ್ಲಾಕ್ ಟವರ್ ಮೇಲೆ ತ್ರಿವರ್ಣ ಧ್ವಜ ಹಾರಿಸಲು ಮುಂದಾದ ಬಿಜೆಪಿಯ ಮೂವರು ಕಾರ್ಯಕರ್ತರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಲಾಲ್ ಚೌಕ್ ಬಳಿ ಬಂಧಿಸಿದ ಘಟನೆ ಇಂದು ನಡೆದಿದೆ.
ಬಿಜೆಪಿಯ ಕಾರ್ಯಕರ್ತರ ಗುಂಪು ಘಂಟಾ ಘರ್(ಕ್ಲಾಕ್ ಟವರ್) ಮೇಲೆ ರಾಷ್ಟ್ರಧ್ವಜ ಹಾರಿಸಲು ಮುಂದಾಗಿತ್ತು. ಕೂಡಲೇ ಅವರನ್ನು ತಡೆದ ಪೊಲೀಸರು ಮೂವರನ್ನು ಬಂಧಿಸಿ ಕೋಟಿಬಾಗ್ ಠಾಣೆಗೆ ಕರೆದೊಯ್ದರು ಎಂದು ತಿಳಿದು ಬಂದಿದೆ.
ಇನ್ನು ಕಾಶ್ಮೀರದಲ್ಲಿ ರಾಷ್ಟ್ರ ಧ್ವಜವಷ್ಟೇ ಹಾರಾಡಬೇಕು. ಈಕುರಿತು ಮೆಹಬೂಬಾ ಮುಫ್ತಿ, ಒಮರ್ ಅಬ್ದುಲ್ಲಾ ಮತ್ತು ಪೀಪಲ್ಸ್ ಅಲೆಯನ್ಸ್ ಫಾರ್ ಗುಪ್ಕಾರ್ ಮೈತ್ರಿಕೂಟದ ಸದಸ್ಯರಿಗೆ ಸ್ಪಷ್ಟ ಸಂದೇಶ ರವಾನಿಸುವುದು ನಮ್ಮ ಉದ್ದೇಶವಾಗಿತ್ತು. ಹೀಗಾಗಿ ತ್ರಿವರ್ಣ ಧ್ವಜ ಹಾರಿಸಲು ಪ್ರಯತ್ನಿಸಿದ್ದೆವು ಎಂದು ಬಿಜೆಪಿ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.