ನವದೆಹಲಿ, ಅ. 27 (DaijiworldNews/HR) : ಬಹುಕೋಟಿ ಹಗರಣದ ಪ್ರಮುಖ ಆರೋಪಿ, ಉದ್ಯಮಿ ನೀರವ್ ಮೋದಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ಸತತ 7ನೇ ಬಾರಿಗೆ ಲಂಡನ್ನಿನ ಕೋರ್ಟ್ ಅರ್ಜಿ ತಿರಸ್ಕರಿಸಿದೆ.
ನೀರವ್ ಮೋದಿ ಅವರನ್ನು ಮುಂಬೈ ಶಾಖೆಯೊಂದರಲ್ಲಿ 13,000 ಕೋಟಿ ರೂ.ಗಳ ವಂಚನೆ ಮತ್ತು ಅಕ್ರಮ ವಹಿವಾಟು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 19ರಂದು ಲಂಡನ್ನಿನ ಸ್ಕಾಟ್ಲೆಂಡ್ ಯಾರ್ಡ್ ಅಧಿಕಾರಿಗಳು ಬಂಧಿಸಿದ್ದರು.
ಇನ್ನು ನೀರವ್ ಮೋದಿಗೆ ಸಂಬಂಧಿಸಿದ ಆಸ್ತಿ, ವಸ್ತುಗಳನ್ನು ಜಪ್ತಿ, ಹರಾಜು ಹಾಕಲು ವಿಶೇಷ ಕೋರ್ಟ್ ಅನುಮತಿ ನೀಡಿದೆ.
ಇದೀಗ ನೀರವ್ ಪತ್ನಿ ಅಮಿ ಮೋದಿಗೆ ಇಂಟರ್ ಪೋಲ್ ಸಂಸ್ಥೆಯಿಂದ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಬಹುಕೋಟಿ ಹಗರಣಕ್ಕೆ ಸಂಬಂಧಿಸಿದ ಅರೋಪಿಗಳಾದ ನೀರವ್ ಮೋದಿ, ಮೆಹುಲ್ ಚೊಕ್ಸಿ ಅವರು ಭಾರತದಿಂದ ಪರಾರಿಯಾಗಿದ್ದರು, ಬಳಿಕ ಅವರನ್ನು ವಿವಿಧ ತನಿಖಾ ಸಂಸ್ಥೆಗಳು ಭಾರತಕ್ಕೆ ಕರೆ ತಂದು ವಿಚಾರಣೆ ನಡೆಸಲು ಯತ್ನಿಸುತ್ತಿವೆ.