ಬೆಂಗಳೂರು, ಅ. 27 (DaijiworldNews/HR): ಅಕ್ಟೋಬರ್ 28ರಂದು ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಚುನಾವಣೆಗೆ ನಡೆಯಲಿದ್ದು, ಪ್ರಚಾರ ಕಾರ್ಯ ಸೋಮವಾರ ಸಂಜೆ 5 ಗಂಟೆಗೆ ಅಂತ್ಯಗೊಂಡಿದೆ.
ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷಗಳು ಬಿರಿಸಿನ ಪ್ರಚಾರ ನಡೆಸಿದ್ದು, ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ನವೆಂಬರ್ 2ರಂದು ಫಲಿತಾಂಶ ಪ್ರಕಟವಾಗಲಿದೆ.
ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಆರ್. ಚೌಡರೆಡ್ಡಿ, ಕಾಂಗ್ರೆಸ್ನಿಂದ ರಮೇಶ್ ಬಾಬು, ಬಿಜೆಪಿಯಿಂದ ಚಿದಾನಂದ ಗೌಡ ಅಭ್ಯರ್ಥಿಯಾಗಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಬಿಜೆಪಿಯಿಂದ ಎಸ್.ವಿ. ಸಂಕನೂರ, ಕಾಂಗ್ರೆಸ್ನಿಂದ ಕುಬೇರಪ್ಪ. ಇನ್ನು ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ನಿಂದ ಶರಣಪ್ಪ ಮಟ್ಟೂರ, ಬಿಜೆಪಿಯಿಂದ ಶಶಿಲ್ ನಮೋಶಿ, ಜೆಡಿಎಸ್ನಿಂದ ತಿಮ್ಮಯ್ಯ ಪುರ್ಲೆ , ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯಿಂದ ಪುಟ್ಟಣ್ಣ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್ನಿಂದ ಎ. ಪಿ. ರಂಗನಾಥ್, ಕಾಂಗ್ರೆಸ್ನಿಂದ ಪ್ರವೀಣ್ ಪೀಟರ್ ಅಭ್ಯರ್ಥಿಯಾಗಿದ್ದಾರೆ.