ನವದೆಹಲಿ,ಅ. 27 (DaijiworldNews/HR): ಹತ್ರಸ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಅಲಹಾಬಾದ್ ಹೈಕೋರ್ಟ್ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಕುಟುಂಬಸ್ಥರು ಮತ್ತು ಸಾಕ್ಷಗಳಿಗೆ ನೀಡಿರುವ ಭದ್ರತೆ ಸೇರಿದಂತೆ ಎಲ್ಲಾ ಆಯಾಮಗಳ ಕುರಿತು ಇನ್ನು ಮುಂದೆ ಅಲಹಾಬಾದ್ ಹೈಕೋರ್ಟ್ ವಿಚಾರಣೆ ನಡೆಸಲಿದೆ ಎಂಬುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ಇನ್ನು ಸಿಬಿಐ ತನಿಖೆಯನ್ನು ಅಲಹಾಬಾದ್ ಹೈಕೋರ್ಟ್ ನಿರ್ವಹಿಸಲಿದ್ದು, ಹತ್ರಸ್ ಪ್ರಕರಣದ ವಿಚಾರಣೆಯನ್ನು ದೆಹಲಿಗೆ ವರ್ಗಾಯಿಸುವ ವಿಚಾರದಲ್ಲಿ ತನಿಖೆಯನ್ನು ಸಿಬಿಐ ಮುಗಿಸಿ ನಂತರ ಅದು ನಿರ್ಧರಿಸುವುದು ಒಳ್ಳೆಯದು ಎಂದು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ಮೂವರು ನ್ಯಾಯಾಧೀಶರನ್ನೊಳಗೊಂಡ ಪೀಠ ತಿಳಿಸಿದೆ.