ನವದೆಹಲಿ, ಅ. 27 (DaijiworldNews/MB) : ಕೊರೊನಾ ನಿಯಂತ್ರಣಕ್ಕಾಗಿ ಪ್ರಸ್ತುತ ಜಾರಿಯಲ್ಲಿರುವ ಅನ್'ಲಾಕ್ 5 ಮಾರ್ಗಸೂಚಿಯನ್ನು ಕೇಂದ್ರ ಗೃಹ ಸಚಿವಾಲಯ ವಿಸ್ತರಿಸಿದ್ದು ಈ ವಿಸ್ತರಣೆಯನ್ನು ನವೆಂಬರ್ 30ರವರೆಗೆ ವಿಸ್ತರಣೆ ಮಾಡಲಾಗಿದೆ.
ಕೊರೊನಾ ನಿಯಮಾವಳಿಯನ್ನು ಈಗಾಗಲೇ ಸಾಕಷ್ಟು ಸಡಿಲಗೊಳಿಸಲಾಗಿದ್ದು, ನವೆಂಬರ್ ತಿಂಗಳಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.
ದೇಶದಾದ್ಯಂತ ಕಂಟೈನ್ಮೆಂಟ್ ಝೋನ್ಗಳಲ್ಲಿ ಲಾಕ್ಡೌನ್ ನವೆಂಬರ್ 30ರವರೆಗೆ ಮುಂದುವರೆಯಲಿದೆ. ಉಳಿದ ಪ್ರದೇಶಗಳಲ್ಲಿ ಅನ್ ಲಾಕ್ 5.0 ಮಾರ್ಗಸೂಚಿಯಲ್ಲಿ ಪ್ರಕಟಿಸಿದ ನಿಯಮಗಳು ಜಾರಿಯಲ್ಲಿರುತ್ತವೆ. ಚಿತ್ರ ಮಂದಿರ, ಈಜುಕೊಳ, ಕ್ರೀಡಾ ತರಬೇತಿ, ಮನೋರಂಜನಾ ಪಾರ್ಕ್ಗಳನ್ನು ತೆರೆಯಲು ಅನ್ ಲಾಕ್ 5 ಮಾರ್ಗಸೂಚಿಯಲ್ಲಿ ಅವಕಾಶ ನೀಡಲಾಗಿದೆ.