ಪಾಟ್ನಾ, ಅ. 28 (DaijiworldNews/MB) : ಬಿಹಾರ ರಾಜ್ಯದ 243 ವಿಧಾನಸಭಾ ಕ್ಷೇತ್ರಗಳ ಚುನಾವಣೆಯು ಮೂರು ಹಂತಗಳಲ್ಲಿ ನಡೆಯಲಿದೆ. ಬುಧವಾರ ಮೊದಲ ಹಂತದಲ್ಲಿ 71 ಕ್ಷೇತ್ರಗಳಲ್ಲಿ ಮತದಾನ ಪ್ರಾರಂಭವಾಗಿದೆ.
ಕೊರೊನಾ ಕಾರಣದಿಂದಾಗಿ ಚುನಾವಣಾ ಆಯೋಗವನ್ನು ಸುರಕ್ಷಿತೆಗೆ ಪ್ರಾತಿನಿಧ್ಯತೆ ನೀಡಿ ಈಗಾಗಲೇ ಮಾರ್ಗಸೂಚಿ ಹೊರಡಿಸಿದೆ. ಈ ಮಾರ್ಗಸೂಚಿ ಪ್ರಕಾರವಾಗಿ ಒಂದು ಮತಗಟ್ಟೆಯಲ್ಲಿ 1600 ರಿಂದ 1000 ಮತದಾರರಿಗೆ ಮಾತ್ರ ಮತ ಹಾಕುವ ಹಕ್ಕು ಇದ್ದು 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಪೋಸ್ಟರ್ ಕಾರ್ಡ್ ಮೂಲಕ ಮತದಾನ ಮಾಡುವುದಕ್ಕೆ ಅನುಮತಿ ನೀಡಲಾಗಿದೆ. 71 ವಿಧಾನಸಭಾ ಕ್ಷೇತ್ರಗಳಲ್ಲಿ 952 ಮಂದಿ ಪುರುಷ ಮತ್ತು 114 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸುಮಾರು 2 ಕೋಟಿಗೂ ಅಧಿಕ ಮತದಾರರು ಒಟ್ಟು 1066 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧಾರ ಮಾಡಲಿದ್ದಾರೆ. ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ 2.14 ಕೋಟಿ ಮತದಾರರು ಮತ ಹಾಕಲಿದ್ದು ಈ ಪೈಕಿ 1.01 ಕೋಟಿ ಮಹಿಳೆಯರಾಗಿದ್ದು, 599 ತೃತೀಯ ಲಿಂಗಿಗಳಿದ್ದಾರೆಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಕೊರೊನಾ ಹಿನ್ನೆಲೆ ವೋಟಿಂಗ್ ಯಂತ್ರವನ್ನು ಸ್ಯಾನಿಟೈಸ್ ಮಾಡುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಥರ್ಮಲ್ ಸ್ಕ್ರೀನಿಂಗ್ನ್ನು ಕಡ್ಡಾಯವಾಗಿ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.