ಪಾಟ್ನಾ, ಅ. 28 (DaijiworldNews/MB) : ಬಿಹಾರದಲ್ಲಿ ಇಂದು ಮೊದಲ ಹಂತದ ಚುನಾವಣೆ ಆರಂಭವಾಗಿದೆ. ನವೆಂಬರ್ 3 ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಈ ನಡುವೆ ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಬಿಡುಗಡೆ ಮಾಡಿರುವ ವರದಿಯ ಪ್ರಕಾರ, ಈ ಚುನಾವಣೆಯಲ್ಲಿ ರಾಷ್ಟ್ರೀಯ ಜನತಾದಳ (ಆರ್ಜೆಡಿ) ಪಕ್ಷವು ಗರಿಷ್ಠ ಸಂಖ್ಯೆಯ ಕಳಂಕಿತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಒಟ್ಟು 1,463 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು ಈ ಪೈಕಿ 502 ಮಂದಿ ಕ್ರಿಮಿನಲ್ ಆರೋಪ ಎದುರಿಸುತ್ತಿದ್ದಾರೆ. ಈ 502 ಅಭ್ಯರ್ಥಿಗಳಲ್ಲಿ 389 ಮಂದಿ ಗಂಭೀರ ಕ್ರಿಮಿನಲ್ ಆರೋಪ ಎದುರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸಾಂದರ್ಭಿಕ ಚಿತ್ರ
ಎರಡನೇ ಹಂತದಲ್ಲಿ ಆರ್ಜೆಡಿಯು 56 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ಅದರಲ್ಲಿ 36 ಮಂದಿ ಕ್ರಿಮಿನಲ್ ಆರೋಪ ಎದುರಿಸುತ್ತಿದ್ದಾರೆ. ಈ ಪೈಕಿ 28 ಮಂದಿ ಗಂಭೀರ ಕ್ರಿಮಿನಲ್ ಆರೋಪ ಎದುರಿಸುತ್ತಿದ್ದಾರೆ. ಎರಡನೇ ಅತಿ ಹೆಚ್ಚು ಕಳಂಕಿತ ಅಭ್ಯರ್ಥಿಗಳು ಬಿಜೆಪಿಯಿಂದ ಕಣಕ್ಕಿಳಿದಿದ್ದು 46 ಅಭ್ಯರ್ಥಿಗಳ ಪೈಕಿ 29 ಮಂದಿ ಕ್ರಿಮಿನಲ್ ಆರೋಪ ಎದುರಿಸುತ್ತಿದ್ದಾರೆ. ಈ ಪೈಕಿ 20 ಮಂದಿ ಗಂಭೀರ ಕ್ರಿಮಿನಲ್ ಆರೋಪ ಎದುರಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಜೆಡಿ-ಯುನಿಂದ ಸ್ಪರ್ಧಿಸುವ 43 ಅಭ್ಯರ್ಥಿಗಳ ಪೈಕಿ 20 ಮಂದಿ ಕಳಂಕಿತರಾಗಿದ್ದು ಅವರಲ್ಲಿ 15 ಮಂದಿ ಗಂಭೀರ ಕ್ರಿಮಿನಲ್ ಆರೋಪ ಎದುರಿಸುತ್ತಿದ್ದಾರೆ. ಎರಡನೇ ಹಂತದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 24 ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ 14 ಮಂದಿ ಕ್ರಿಮಿನಲ್ ಆರೋಪ ಎದುರಿಸುತ್ತಿದ್ದು ಈ ಪೈಕಿ ಅವರಲ್ಲಿ 10 ಮಂದಿ ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ. ಎಲ್ಜೆಪಿಯ 52 ಅಭ್ಯರ್ಥಿಗಳಲ್ಲಿ 24 ಮಂದಿ ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಾರೆ ಎಂದು ವರದಿ ಉಲ್ಲೇಖಿಸಿದೆ.
ಇನ್ನು 1,463 ಅಭ್ಯರ್ಥಿಗಳ ಪೈಕಿ ಅಭ್ಯರ್ಥಿಗಳ ಕೋಟ್ಯಾಧಿಪತಿಗಳು ಎಂದು ಎಡಿಆರ್ ವರದಿಯು ಬಹಿರಂಗಪಡಿಸಿದೆ.