ನವದೆಹಲಿ, ಅ. 29 (DaijiworldNews/MB) : ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ.
ನನಗೆ ಕೊರೊನಾ ಪಾಸಿಟಿವ್ ಆಗಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆಗೆ ಒಳಪಡುವಂತೆ ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಕೇಂದ್ರ ಗೃಹ ಸಚವ ಅಮಿತ್ ಶಾ, ಕೇಂದ್ರ ಸಚಿವರಾದ ನಿತೀನ್ ಗಡ್ಕರಿ, ದರ್ಮೇಂದ್ರ ಪ್ರಧಾನ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು.