ತಿರುವನಂತಪುರಂ, ಅ. 29 (DaijiworldNews/HR): ಕೇರಳದಲ್ಲಿ ಅಕ್ರಮ ಚಿನ್ನ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದ ಐಎಎಸ್ ಅಧಿಕಾರಿ ಎಂ. ಶಿವಶಂಕರ್ ಅವರನ್ನು ಬಂಧಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಎಂ. ಶಿವಶಂಕರ್ ಜಾಮೀನು ನೀಡಲು ನಿರಾಕರಿಸಿತ್ತು. ಈ ಪ್ರಕರಣದ ತನಿಖೆ ಕೈಗೊಂಡಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಿವಶಂಕರ್ ಅವರನ್ನು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದುಕೊಳ್ಳಲಿದ್ದಾರೆ.
ಇನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪ್ರಧಾನ ಕಾರ್ಯದರ್ಶಿಯಾಗಿ ಶಿವಶಂಕರ್ ಕಾರ್ಯ ನಿರ್ವಹಿಸುತ್ತಿದ್ದರು.