ಬೆಂಗಳೂರು,ಅ. 29 (DaijiworldNews/HR): ಆರ್ ಆರ್ ನಗರ ಮತ್ತು ಶಿರಾ ಕ್ಷೇತ್ರಗಳ ಉಪಚುನಾವಣೆ ಮುಗಿದ ನಂತರ ಕರ್ನಾಟಕ ರಾಜಕೀಯದಲ್ಲಿ ಬದಲಾವಣೆ ಆಗಲಿದ್ದು, ಮತ್ತೆ ಚುನಾವಣೆ ನಡೆಯಬಹುದು ಎಂದು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಆಗುತ್ತಿರುವ ಬೆಳವಣಿಗೆ ನೋಡಿದಾಗ ರಾಜ್ಯದಲ್ಲಿ ಉಪಚುನಾವಣೆಯ ಬಳಿಕ ಮತ್ತೆ ಚುನಾವಣೆ ಬರುವ ಸಾಧ್ಯತೆ ಕಂಡು ಬರುತ್ತಿದೆ ಎಂದು ಹೇಳಿದ್ದಾರೆ.
ಇನ್ನು ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗಬೇಕು ಎನ್ನುವುದು ಜನರ ಮತ್ತು ನನ್ನ ಅಭಿಪ್ರಾಯ. ಆದರೆ ಕಾಂಗ್ರೆಸ್ ನಲ್ಲಿ ಹೈಕಮಾಂಡ್ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನ ನಿರ್ಧರಿಸುತ್ತದೆ ಎಂದರು.