ಕೋಲ್ಕತಾ,ಅ. 29 (DaijiworldNews/HR): ಪಶ್ಚಿಮಬಂಗಾಳ ವಿಧಾನಸಭೆಯ ಉಪ ಸಭಾಪತಿ ಮತ್ತು ಜಾರ್ಗಾಮ್ ವಿಧಾನಸಭಾ ಕ್ಷೇತ್ರದ ತೃಣಮೂಲ ಕಾಂಗ್ರೆಸ್ ಶಾಸಕ ಸುಕುಮಾರ್ ಹನ್ಸಡಾ ನಿಧನರಾಗಿದ್ದಾರೆ ಎಂದು ಪಶ್ಚಿಮಬಂಗಾಳ ಸರ್ಕಾರ ಖಚಿತಪಡಿಸಿದೆ.
ಕೊರೊನಾ ಸೋಂಕು ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ಸುಕುಮಾರ್ ಹನ್ಸಡಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ವರದಿ ಹೇಳಿದೆ.
ಇನ್ನು 2018ರ ಡಿಸೆಂಬರ್ ನಲ್ಲಿ ಹನ್ಸಡಾ ಅವರನ್ನು ಡೆಪ್ಯುಟಿ ಸ್ಪೀಕರ್ ಆಗಿ ನೇಮಕ ಮಾಡಲಾಗಿತ್ತು.
ಸುಕುಮಾರ್ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದು, 2011 ಮತ್ತು 2016ರ ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.