ಲಕ್ನೋ, ಅ.29 (DaijiworldNews/PY): ಮುಂದಿನ ಉತ್ತರ ಪ್ರದೇಶ ಪರಿಷತ್ ಚುನಾವಣೆಯ ಸಂದರ್ಭ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡುವುದಾಗಿ ಬಿಎಸ್ಪಿ ನಾಯಕಿ ಮಾಯಾವತಿ ಹೇಳಿದ್ದಾರೆ.
ಬಿಎಸ್ಪಿ ಪಕ್ಷದ ಎರಡನೇ ಅಭ್ಯರ್ಥಿಯ ಮೇಲೆ ಪ್ರಾಬಲ್ಯ ಹೊಂದಿರುವ ಯಾವುದೇ ಪಕ್ಷದ ಅಭ್ಯರ್ಥಿಯು ಎಲ್ಲಾ ಬಿಎಸ್ಪಿ ಶಾಸಕರ ಮತವನ್ನು ಖಚಿತವಾಗಿ ಪಡೆಯಲಿದ್ದಾರೆ. ಮುಂದಿನ ವಿಧಾನಪರಿಷತ್ ಚುನಾವಣೆಯ ಸಂದರ್ಭ ಬಿಜೆಪಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಲೋಕಸಭಾ ಚುನಾವಣೆಗೆ ನಾವು ಸಮಾಜವಾದಿ ಪಕ್ಷದೊಂದಿಗೆ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನಿಸಿದ ಸಂದರ್ಭ, ನಾವು ತುಂಬಾ ಶ್ರಮಪಟ್ಟಿದ್ದೇವೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಕೌಟುಂಬಿಕ ಒಳಜಗಳದ ಕಾರಣದಿಂದ ಸಮಾಜವಾದಿ ಪಕ್ಷಕ್ಕೆ ಅಧಿಕ ಮತ ದೊರಕಲಿಲ್ಲ ಎಂದು ತಿಳಿಸಿದ್ದಾರೆ.
ಬಹುಜನ ಸಮಾಜಪಕ್ಷದ ಏಳು ಮಂದಿ ರಾಮ್ಜೀ ಗೌತಮ್ ಅವರ ನಾಮನಿರ್ದೇಶನ ಮಾಡಿದ್ದನ್ನು ವಿರೋಧಿಸಿ ಪಕ್ಷದ ವಿರುದ್ದ ಬಂಡಾಯವೆದ್ದಿದ್ದು, ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.