ಬೆಂಗಳೂರು, ಅ. 29 (DaijiworldNews/MB) : ಈಶಾನ್ಯ ಮಾರುತಗಳ ಕಾರಣದಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ ನವೆಂಬರ್ 1 ರಿಂದ ಹಿಂಗಾರಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಹಿಂಗಾರು ಮಳೆಯು ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಪ್ರಭಾವ ಬೀಳಲಿದೆ ಎನ್ನಲಾಗಿದೆ. ಹಾಗೆಯೇ ಕರಾವಳಿ, ಉತ್ತರ ಒಳನಾಡಿನಲ್ಲಿ ಸಾಧಾರಣವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದೇಶದಲ್ಲಿ ಈಗಾಗಲೇ ನೈರುತ್ಯ ಮುಂಗಾರು ಮಳೆಯ ಸಂದರ್ಭದಲ್ಲಿ ಭಾರೀ ಹಾನಿ ಉಂಟಾಗಿದೆ. ಆದರೆ ಈಗ ರಾಜ್ಯದಲ್ಲಿ ಹಿಂಗಾರಿನಲ್ಲೂ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದಲ್ಲಿ ಈ ಭಾರಿ ಹಿಂಗಾರು ಮಳೆ ಅಕ್ಟೋಬರ್ 28 ರಿಂದ ಪ್ರಾರಂಭವಾಗಿದೆ. ಈ ಬಾರಿ ತಡವಾಗಿ ಹಿಂಗಾರು ಮಳೆ ಆರಂಭಿಸಿದೆ. ಅಷ್ಟೇ ಅಲ್ಲದೇ ಈ ಬಾರಿ ಮುಂಗಾರಿನಲ್ಲಿ ಭಾರೀ ಪ್ರಮಾಣದ ಮಳೆಯಾಗಿದೆ ಎಂದು ವರದಿ ತಿಳಿಸಿದೆ.