ಬೆಂಗಳೂರು, ಅ.30 (DaijiworldNews/PY): ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಿಎಂ ಬಿಎಸ್ವೈ, ಸಂಪುಟದ ಸಚಿವರು ಹಾಗೂ ಗಣ್ಯರು ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ಈದ್ ಮಿಲಾದ್ ಹಬ್ಬದ ಶುಭಾಶಯ ತಿಳಿಸಿದ್ದಾರೆ.
ಟ್ವೀಟ್ ಮೂಲ ಶುಭಕೋರಿರುವ ಸಿಎಂ ಬಿಎಸ್ವೈ ಅವರು, "ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ಈದ್ ಮಿಲಾದ್ ಹಬ್ಬದ ಶುಭಾಶಯಗಳು. ಪ್ರವಾದಿ ಮುಹಮ್ಮದ್ ಅವರ ಸಂದೇಶಗಳು ಸಮಾಜದಲ್ಲಿ ಸೋದರತ್ವ, ಸೌಹಾರ್ದತೆಗಳನ್ನು ಮತ್ತಷ್ಟು ಗಟ್ಟಿಗೊಳಿಸಲಿ ಎಂದು ಹಾರೈಸುತ್ತೇನೆ" ಎಂದಿದ್ದಾರೆ
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಟ್ವೀಟ್ ಮಾಡಿದ್ದು, "ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ಈದ್ ಮಿಲಾದ್ ಹಬ್ಬದ ಶುಭಾಶಯಗಳು. ಸಹಬಾಳ್ವೆ, ಸಾಮರಸ್ಯ, ಸೌಹಾರ್ದತೆಗೆ ಪ್ರವಾದಿ ನೀಡಿದ ಸಂದೇಶಗಳು ಸಮಾಜಕ್ಕೆ ದಾರಿದೀಪವಾಗಲಿ ಎಂದು ಹಾರೈಸುತ್ತೇನೆ" ಎಂದು ಹೇಳಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, "ಪ್ರವಾದಿ ಮಹಮ್ಮದ್ ಪೈಗಂಬರರ ಬೋಧನೆ ಮತ್ತು ಸಾಧನೆ ಸಮಾನತೆ-ಸೌಹಾರ್ದತೆಯ ಸಮಾಜವನ್ನು ಕಟ್ಟುವ ನಮ್ಮ ಕೈಗಳಿಗೆ ಇನ್ನಷ್ಟು ಬಲ ತಂದು ಕೊಡಲಿ. ನಾಡಿನ ನನ್ನೆಲ್ಲ ಮುಸ್ಲಿಮ್ ಬಂಧುಗಳಿಗೆ ಈದ್-ಮಿಲಾದ್ ಶುಭಾಶಯಗಳು" ಎಂದು ತಿಳಿಸಿದ್ದಾರೆ.