ನವದೆಹಲಿ, ಅ.30 (DaijiworldNews/HR): ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಹತ್ಯೆಗೀಡಾದ ಮೂವರು ಬಿಜೆಪಿ ಕಾರ್ಯಕರ್ತರ ತ್ಯಾಗ ಎಂದಿಗೂ ವ್ಯರ್ಥವಾಗದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಶ್ಮೀರದಲ್ಲಿ ಭಯೋತ್ಪಾದಕರ ಗುಂಡಿಗೆ ಮೂರು ಜನ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಬಲಿಯಾಗಿದ್ದರು.ಇಡೀ ಸಮಾಜವು ದುಃಖಿತ ಕುಟುಂಬಗಳೊಂದಿಗೆ ಇದೆ ಮತ್ತು ಅವರ ತ್ಯಾಗವು ವ್ಯರ್ಥವಾಗುವುದಿಲ್ಲ ಎಂದು ಬರೆದಿದ್ದಾರೆ.
ಇನ್ನು ರಾಷ್ಟ್ರೀಯವಾದಿಗಳನ್ನು ಕಳೆದುಕೊಳ್ಳುವುದು ದೇಶಕ್ಕೆ ದೊಡ್ಡ ನಷ್ಟವಾಗಿದೆ ಎಂದು ಜೆ.ಪಿ. ನಡ್ಡಾ ಹೇಳಿದ್ದಾರೆ. ಕುಲ್ಗಾಮ್ ಜಿಲ್ಲೆಯ ವೈ ಕೆ ಪೊರಾ ಪ್ರದೇಶದಲ್ಲಿ ಉಗ್ರಗಾಮಿಗಳಿಂದ ಫಿಡಾ ಹುಸೇನ್, ಉಮರ್ ಹಜಮ್ ಮತ್ತು ಉಮರ್ ರಶೀದ್ ಬೈಗ್ ಗುಂಡಿನ ದಾಳಿಗೆ ಸಿಕ್ಕಿ ಬಲಿಯಾಗಿದ್ದರು.