ಪೂಂಚ್, ನ.01 (DaijiworldNews/PY): ಪಾಕ್ ಸೇನಾಪಡೆಗಳ ಕದನ ವಿರಾಮ ಉಲ್ಲಂಘನೆ ಹಾಗೂ ಅಪ್ರಚೋದಿತ ಗುಂಡಿನ ದಾಳಿಯನ್ನು ಮುಂದುವರೆಸಿದ್ದು, ಇದೀಗ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಕದನ ಉಲ್ಲಂಘನೆ ಮಾಡಿದ್ದು ಅಲ್ಲದೇ, ಭಾರತೀಯ ಸೇನೆಯ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.
ಸಾಂದರ್ಭಿಕ ಚಿತ್ರ
ಭಾರತೀಯ ಸೇನಾಪಡೆಯನ್ನು ಗುರಿಯಾಗಿಸಿಕೊಂಡ ಪಾಕ್ ಸೇನೆ ಪೂಂಚ್ ಜಿಲ್ಲೆಯೆ ಶಾಹ್ಪುರ್, ಕ್ವಾಸ್ಬಾ, ಕಿರ್ಣ್ ಸೆಕ್ಟರ್ನ ಸಮೀಪ ಗುಂಡಿನ ದಾಳಿ ನಡೆಸಿದೆ ಎಂದು ವರದಿ ತಿಳಿಸಿದೆ.
ಪಾಕ್ ಸೇನೆಗಳ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನಾ ಪಡೆ ಕೂಡಾ ದಿಟ್ಟ ಪ್ರತ್ಯುತ್ತರ ನೀಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.