ಶಿವಮೊಗ್ಗ, ನ.03 (DaijiworldNews/PY): "ಮಂಗಳೂರಿನಲ್ಲಿ ನ.5ರಂದು ನಡೆಯಲಿರುವ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ರಾಜ್ಯಸಭೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದೇವೆ" ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಉಪಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, "ಮತದಾರರಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಸಾಧನೆಯನ್ನು ನೋಡಿ ಮತ ಹಾಕುವಂತೆ ಮನವಿ ಮಾಡಿದ್ದೇವೆ. ಆರ್.ಆರ್.ನಗರ ಹಾಗೂ. ಶಿರಾ ಈ ಎರಡೂ ಕ್ಷೇತ್ರಗಳಲ್ಲೂ ಕೂಡಾ ಬಿಜೆಪಿ ಗೆಲುವು ಸಾಧಿಸಲಿದೆ" ಎಂದರು.
"ಅಶೋಕ್ ಗಸ್ತಿ ಅವರ ಕಾರ್ಯವನ್ನು ನೋಡಿ ರಾಜ್ಯಸಭೆಗೆ ಅವರನ್ನು ಆಯ್ಕೆ ಮಾಡಿದ್ದೆವು. ಆದರೆ, ಅವರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಅವರನ್ನು ನಾವು ಕಳೆದುಕೊಂಡಿದ್ದೇವೆ" ಎಂದು ಬೇಸರ ವ್ಯಕ್ತಪಡಿಸಿದರು.