ಬೆಂಗಳೂರು, ಫೆ02(SS): ಇಡಿ ಅಧಿಕಾರಿಗಳು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರಿಗೆ ಅಕ್ರಮ ಹಣ ವರ್ಗಾವಣೆ ಕೇಸ್ಗೆ ಸಂಬಂಧಿಸಿದ ವಿಚಾರಣೆಗೆ ಬರುವಂತೆ ಸಮನ್ಸ್ ನೋಟಿಸ್ ಜಾರಿ ಮಾಡಿದ್ದಾರೆ.
ಡಿ.ಕೆ ಶಿವಕುಮಾರ್ ಸೇರಿದಂತೆ ಗೆಳೆಯ ಸುನಿಲ್ ಶರ್ಮಾ, ಅಂಜನೇಯ, ರಾಜೇಂದ್ರ ಸೇರಿ ಐವರಿಗೆ ಸಮನ್ಸ್ ನೋಟಿಸ್ ಜಾರಿ ಮಾಡಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಇಡಿ ಕೇಸ್ ದಾಖಲಿಸಿಕೊಂಡಿದ್ದರಿಂದ ಡಿಕೆಶಿಗೆ ಬಂಧನದ ಭೀತಿ ಎದುರಾಗಿದೆ.
ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಮುಖ್ಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಡಿಕೆಶಿ ದೆಹಲಿಯಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ತಯಾರಿ ಮಾಡಿಕೊಂಡಿದ್ದಾರೆ. ಸಮನ್ಸ್ ಆಧರಿಸಿ ನಿರೀಕ್ಷಣಾ ಜಾಮೀನಿನ ಅರ್ಜಿಗೆ ತಯಾರಿ ಮಾಡಿಕೊಳ್ಳಲಿದ್ದಾರೆ.
ಈ ಹಿಂದೆ ದೆಹಲಿ ನಿವಾಸದಲ್ಲಿ ಪತ್ತೆಯಾದ 8.5 ಕೋಟಿ ರೂ. ಸಿಕ್ಕ ಹಣದ ಸಂಬಂಧ ಆದಾಯ ತೆರಿಗೆ ಇಲಾಖೆಯ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿತ್ತು. ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಸಿಕ್ಕ ಮಾಹಿತಿ ಆಧರಿಸಿ ನೀಡಿರುವ ದೂರಿನಲ್ಲಿ ಹವಾಲ ಹಣದ ವಿವರವನ್ನು ಉಲ್ಲೇಖಿಸಿತ್ತು. ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಐಟಿ ಇಲಾಖೆ ಹಿರಿಯ ಅಧಿಕಾರಿಗಳು ಈ ಹಿಂದೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಸಿಕ್ಕ ಮಾಹಿತಿ ಆಧರಿಸಿ ನೀಡಿರುವ ದೂರಿನಲ್ಲಿ ಹವಾಲ ಹಣದ ವಿವರವನ್ನು ಉಲ್ಲೇಖಿಸಿದ್ದರು. ಈ ದೂರಿನಲ್ಲಿ ಹವಾಲ ಹಣದ ಮೂಲಕ ಕೋಟಿ ಕೋಟಿ ಹಣವನ್ನು ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಕಳುಹಿಸಿಕೊಟ್ಟಿದ್ದಾರೆ ಎಂಬ ಆರೋಪಗಳನ್ನು ಮಾಡಲಾಗಿತ್ತು.
ಇದೀಗ ಈ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಬರುವಂತೆ ಸಮನ್ಸ್ ನೋಟಿಸ್ ಜಾರಿ ಮಾಡಿದ್ದು, ಡಿಕೆಶಿಗೆ ಬಂಧನದ ಭೀತಿ ಎದುರಾಗಿದೆ.