ಬೆಂಗಳೂರು, ಫೆ 06(SM): ರಾಜ್ಯದಲ್ಲಿರುವ ದೋಸ್ತಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯ ಬಳಿಕ ಅವರು ಮಾತನಾಡಿದರು.
ಎರಡು ಗಂಟೆಗಳ ಕಾಲ ಸುದೀರ್ಘ ಚರ್ಚೆ ಆಗಿದೆ. ಕಾಂಗ್ರೆಸ್-ಜೆಡಿಎಸ್ ಶಾಸಕರು ಮತ್ತು ಸಚಿವರಲ್ಲಿ ಹೊಂದಾಣಿಕೆ ಇಲ್ಲ. ಜನಹಿತವನ್ನು ಸಂಪೂರ್ಣ ಮರೆತಿದ್ದಾರೆ ಎಂದು ಕಿಡಿಕಾರಿದರು. ಯಾವುದೇ ಕಾರಣಕ್ಕೂ ನಾವು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಿಲ್ಲ ಎಂದು ಯಡಿಯೂರಪ್ಪ ಪುನರುಚ್ಛರಿಸಿದರು.