ನವದೆಹಲಿ, ಫೆ 09(SM): ಮದ್ಯ ಸೇವಿಸುವವರು ಸ್ವಲ್ಪ ಎಚ್ಚರದಿಂದ ಇರಬೇಕು. ಇಲ್ಲಂದ್ರೆ ಏನಾಗುತ್ತೇ ಅನ್ನೋದಕ್ಕೆ ಉತ್ತರ ಪ್ರದೇಶ, ಉತ್ತರಾಖಾಂಡ ರಾಜ್ಯಗಳಲ್ಲಿ ನಡೆದ ಘಟನೆಗಳು ಸಾಕ್ಷಿಯಾಗುತ್ತವೆ. ವಿಷಪೂರಿತ ಮದ್ಯ ಸೇವಿಸಿದ ಪರಿಣಾಮ ೩೦ಕ್ಕೂ ಅಧಿಕ ಮಂದಿ ಮೃತಪಟ್ಟ ಘಟನೆ ನಡೆದಿದೆ.
ಬಿಹಾರ, ಉತ್ತರ ಪ್ರದೇಶ ಹಾಗೂ ಉತ್ತರಾಖಾಂಡ ರಾಜ್ಯಗಳಲ್ಲಿ ವಿಷಪೂರಿತ ಮದ್ಯ ಸೇವಿಸಿ 18 ಮಂದಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹಾಗೂ 48ಕ್ಕೂ ಹೆಚ್ಚುಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತರಾಖಾಂಡದ ರೂರ್ಕಿಯಲ್ಲಿ 12 ಮಂದಿ ವಿಷ ಪೂರಿತ ಮದ್ಯಕ್ಕೆ ಬಲಿಯಾಗಿದ್ದಾರೆ.
ಉತ್ತರ ಪ್ರದೇಶದ ಸಹಾನ್ಪುರ್ ಜಿಲ್ಲೆಯ ಡಿಯೋಬಾಂಡ್ ಪ್ರದೇಶದಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಖುಷಿನಗರದಲ್ಲಿ 9 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಬಿಹಾರದಲ್ಲೂ ಎರಡು ಪ್ರಕರಣ ಬೆಳಕಿಗೆ ಬಂದಿದ್ದು, ಇನ್ನು ಅನೇಕರು ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಯ ಪೊಲೀಸ್ ಅಧಿಕಾರಿಗಳನ್ನು ಮೂರು ರಾಜ್ಯಗಳಲ್ಲಿ ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಉತ್ತರ ಪ್ರದೇಶದಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಸಿಎಂ ಯೋಗಿ ಆದಿತ್ಯಾನಾಥ್ ಅವರು ತನಿಖೆ ನಡೆಸುವಂತೆ ಆದೇಶ ನೀಡಿದ್ದಾರೆ.