ನವದೆಹಲಿ,ಮಾ.03(AZM):ಜೈಷ್-ಎ-ಮೊಹ್ಮದ್ ಉಗ್ರ ಸಂಘಟನೆ ಮುಖ್ಯಸ್ಥ, ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಮೌಲಾನಾ ಮಸೂದ್ ಅಜರ್ ಮೃತಪಟ್ಟಿದ್ದಾನೆ ಎನ್ನುವ ಸುದ್ದಿ ಪಾಕಿಸ್ತಾನದಿಂದ ವೈರಲ್ ಆಗಿದೆ.
. ಬಾಲಕೋಟ್ ಮೇಲೆ ಇತ್ತೀಚೆಗೆ ಭಾರತ ನಡೆಸಿದ ದಾಳಿಯಲ್ಲಿ ಅಜರ್ ಮಸೂದ್ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ. ಆದರೆ ಈ ಬಗ್ಗೆ ಪಾಕಿಸ್ತಾನ ಸರಕಾರ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಮಸೂದ್ ಅಜರ್ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, ಪಾಕಿಸ್ತಾನದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.