ಮಂಡ್ಯ,ಮಾ.04(AZM):ಸುಮಲತ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಇಂದು ಮಾಧ್ಯಮಗಳೊಡನೆ ಘೋಷಣೆ ಮಾಡಿದ್ದಾರೆ.
ಹುತಾತ್ಮ ಯೋಧ ಕುಟುಂಬಕ್ಕೆ ಇಂದು ಅವರು ತಮ್ಮ ಜಮೀನನ್ನು ಹಸ್ತಾಂತರಿಸಿ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಇನ್ನು ತಮ್ಮ ಸ್ಪರ್ಧೆಯ ಕುರಿತು ಸೂಕ್ತ ನಿರ್ಧಾರ ಪ್ರಕಟಿಸಲು ಮತ್ತೆ ಸಮಯ ಬೇಕು ಎಂದು ಹೇಳಿದರು.
ಇನ್ನು ಕಾಂಗ್ರೆಸ್ ಮುಖಂಡರ ಜೊತೆ ಮಾತುಕತೆ ಮಾಡಿ ಬಂದಿದ್ದೇನೆ ಪ್ರವಾಸ ಮುಗಿಸಿದ ಬಳಿಕ ಚುನಾವಣೆ ಸ್ಪರ್ಧೆ ಬಗ್ಗೆ ಚಿಂತನೆ ನಡೆಸುತ್ತೇನೆ. ಅಂಬರೀಶ್ ಕಾಂಗ್ರೆಸ್ ಪಕ್ಷದಿಂದ ರಾಜಕೀಯ ಮಾಡಿಕೊಂಡು ಬಂದವರು, ನನ್ನ ಮೊದಲ ಆದ್ಯತೆ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದು ಹೇಳಿದರು.
ನಾನು ರಾಜಕೀಯಕ್ಕೆ ಬಂದರೆ ಮಂಡ್ಯದಿಂದ ಮಾತ್ರ, ನನ್ನನ್ನು ಎಮ್ ಎಲ್ ಸಿ ಮಾಡಿ ಸಚಿವ ಸ್ಥಾನ ಸಿಗುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಇದೇ ಸಂದರ್ಭದಲ್ಲಿ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.