ಕೊಪ್ಪಳ, ಜ 17 ( DaijiworldNews/MS): ಪೊಲೀಸರು ಜೂಜು ಅಡ್ಡೆಗಳ ಮೇಲೆ ದಾಳಿ ಮಾಡೋದು ಸಾಮಾನ್ಯ ಸಂಗತಿ. ಆದ್ರೆ ಕೊಪ್ಪಳದ ಕಾರಟಗಿ ತಾಲೂಕಿನ ಪನ್ನಾಪುರದಲ್ಲಿ ಪೊಲೀಸರು ಜೂಜುಕೋರರ ಬದಲು ಕೋಳಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಪನ್ನಾಪುರ ಬಳಿಯ ಬಸವಣ್ಣ ಕ್ಯಾಂಪ್ನಲ್ಲಿ ಸಂಕ್ರಾತಿ ನಿಮಿತ್ತ ಕೋಳಿ ಕಾಳಗ , ಜೂಜಾಟ ನಡೆಯುತ್ತಿತ್ತು. ಈ ವೇಳೆ ದಾಳಿ ಮಾಡಿರುವ ಪೊಲೀಸರ ಕೈಗೆ ಸಿಗದೆ ಗ್ಯಾಂಬ್ಲರ್ ಗಳುಪರಾರಿಯಾಗಿದ್ದಾರೆ . ಬದಲಾಗಿ ಹುಂಜಗಳು ಸಿಕ್ಕಿದ್ದು, ಜೊತೆಗೆ ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ.
ದಾಳಿ ವೇಳೆ ಪಣಕ್ಕಿಟ್ಟಿದ್ದ ಹುಂಜಗಳನ್ನು ವಶಪಡಿಸಿಕೊಂಡು ಪೊಲೀಸರು ಸೆಲ್ನಲ್ಲಿ ಇಟ್ಟಿದ್ದಾರೆ. ಪೊಲೀಸರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ
ಸಂಕ್ರಾಂತಿ, ಯುಗಾದಿ, ದೀಪಾವಳಿ ಹಬ್ಬದ ನೆಪದಲ್ಲಿ ಕೊಪ್ಪಳ ಜಿಲ್ಲೆಯ ವಿವಿಧ ಕಡೆ ನಿಷೇಧಿತ ಕೋಳಿ ಕಾಳಗ ನಡೆಸಲಾಗುತ್ತದೆ. ಕೋಳಿ ಕಾಳಗಕ್ಕೆ ಕೋಟ್ಯಂತರ ರೂಪಾಯಿ ಜೂಜು ವಹಿವಾಟು ನಡೆಯುತ್ತದೆ.