ಲಕ್ನೋ, ಜ 17 ( DaijiworldNews/MS): ಚಲಿಸುತ್ತಿದ್ದ ಸ್ಕೂಟಿಯಲ್ಲಿ ಜೋಡಿಯೊಂದು ರೊಮ್ಯಾನ್ಸ್ ಮಾಡಿದ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಪಟ್ಟಂತೆ 23 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ರಾಜಧಾನಿ ಹಜರತ್ಗಂಜ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಯುವಕನನ್ನು ಚಿನ್ಹತ್ ನಿವಾಸಿ ವಿಕ್ಕಿ ಎಂದು ಗುರುತಿಸಲಾಗಿದೆ. ಆತನ ಜೊತೆಗಿದ್ದ ಯುವತಿ ಅಪ್ರಾಪ್ತ ವಯಸ್ಸಿನವಳಾಗಿದ್ದು 12ನೇ ತರಗತಿಯ ವಿದ್ಯಾರ್ಥಿನಿ ಎಂದು ಪೊಲೀಸರು ತಿಳಿಸಿದ್ದಾರೆ
ವಾಹನ ನಿಬಿಡ ರಸ್ತೆಯಲ್ಲಿ ಸ್ಕೂಟಿಯಲ್ಲಿ ಹೋಗುತ್ತಿರುವ ಜೋಡಿಯೊಂದು ರೊಮ್ಯಾನ್ಸ್ ಮಾಡುತ್ತಿರುವ ಹಾಗೂ ಹುಡುಗಿ ಸ್ಕೂಟಿ ಸವಾರನನ್ನು ಅಪ್ಪಿಕೊಂಡು ಕಿಸ್ಸಿಂಗ್ ಮಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ತುಂಬಾ ವೈರಲ್ ಆಗಿತ್ತು. ಇದನ್ನು ಯಾರೋ ಇತರ ಸವಾರರು ಈ ದೃಶ್ಯವನ್ನು ಚಿತ್ರೀಕರಿಸಿದ್ದರು.
ಇದನ್ನು ಆಧರಿಸಿ ತನಿಖೆ ನಡೆಸಿರುವ ಪೊಲಿಸರು ವಿಡಿಯೊದಲ್ಲಿದ್ದ ಯುವಕನನ್ನು ಬಂಧಿಸಿದ್ದಾರೆ. ಈ ಸಂಬಂಧ ಸೆಕ್ಷನ್ 294, 279 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಪ್ಪಿಸ್ಥರ ವಿರುದ್ಧ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹಜರತ್ಗಂಜ್ ಪೊಲೀಸರು ತಿಳಿಸಿದ್ದಾರೆ. ಘಟನೆ ವೇಳೆ ಬಳಸಿದ್ದ ಸ್ಕೂಟಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.