ನವದೆಹಲಿ, ಜ 19 ( DaijiworldNews/MS): ಭಾರತದ ರಾಜಕಾರಣಕ್ಕೆ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರಂಥ ನಾಯಕರ ಅಗತ್ಯವಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ಹೇಳಿದ್ದಾರೆ.
ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರು ತಮ್ಮ ಸ್ಥಾನಕ್ಕೆ ದಿಡೀರ್ ರಾಜೀನಾಮೆ ನೀಡಿದ್ದು, ಫೆಬ್ರುವರಿ 7ರೊಳಗೆ ಉನ್ನತ ಹುದ್ದೆಯಿಂದ ಕೆಳಗಿಳಿಯುವುದಾಗಿ ಪಕ್ಷದ ಸಭೆಯಲ್ಲಿ ಘೋಷಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಅವರು, ಖ್ಯಾತ ಕ್ರಿಕೆಟ್ ವಿಶ್ಲೇಷಕ ವಿಜಯ್ ಮರ್ಚೆಂಟ್ ವೃತ್ತಿ ಜೀವನದಲ್ಲಿ ಉತ್ತುಂಗದಲ್ಲಿ ನಿವೃತ್ತಿ ಬಗ್ಗೆ ಒಮ್ಮೆ ಹೇಳಿದ್ದರು. ಆದರೆ, ಅಭಿಮಾನಿಗಳು ವಿಜಯ್ ಅವರನ್ನು ಯಾವಾಗ ನಿವೃತ್ತಿ ಹೊಂದುತ್ತೀರಿ ಎಂದು ಕೇಳಲಿಲ್ಲ. ಬದಲಿಗೆ ಏಕೆ ನಿವೃತ್ತರಾಗುತ್ತಿದ್ದೀರಿ ಎಂದು ಕೇಳಿದ್ದರು. ಇದೀಗ ಕಿವೀಸ್ ಪ್ರಧಾನಿ ಜಸಿಂದಾ ಅರ್ಡೆರ್ನ್ ಅವರು ಮರ್ಚೆಂಟ್ರ ನಿಯಮವನ್ನು ಅನುಸರಿಸುತ್ತಿರುವುದಾಗಿ ಹೇಳಿದ್ದಾರೆ. ಭಾರತದ ರಾಜಕೀಯಕ್ಕೆ ಜಸಿಂದಾ ಅವರಂತಹವರು ಬೇಕಾಗಿದ್ದಾರೆ’ ಎಂದು ಬರೆದುಕೊಂಡಿದ್ದಾರೆ