ಕಲಬುರಗಿ, ಜ 19 (daijiworldNews/HR): ಪಿಎಸ್ ಐ ಪರೀಕ್ಷಾ ಹಗಣದ ಕಿಂಗ್ ಪಿನ್ ಆರ್. ಡಿ. ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ಅವರ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಮನೆಯ ಮೇಲೆ ಆದಾಯ ಮತ್ತು ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ನಡೆಸಿದ್ದಾರೆ.
ಎರಡು ತಂಡಗಳಲ್ಲಿ ಆಗಮಿಸಿದ ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸಿದ್ದು, ಈ ವೇಳೆ ರುದ್ರಗೌಡ ಮನೆಯಲ್ಲಿದ್ದು ಅಧಿಕಾರಿಗಳಿಗೆ ಸಹಕಾರ ನೀಡುತ್ತಿದ್ದಾರೆಂದು ಮೂಲಗಳು ಹೇಳಿವೆ.
ಇನ್ನು ಈ ವೇಳೆ ಪತ್ನಿ ಹಾಗೂ ತಾಯಿ ಸೇರಿದಂತೆ ಇತರೆ ವ್ಯಕ್ತಿಗಳು ಮನೆಯಲ್ಲಿದ್ದು ಆದಾಯ ಇಲಾಖೆ ತೆರಿಗೆ ಅಧಿಕಾರಿಗಳಿಗೆ ಸಹಕಾರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.