ನವದೆಹಲಿ, ಜ 20 (DaijiworldNews/HR): ವಿಮಾನದೊಳಗೆ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ 30 ಲಕ್ಷ ರೂಪಾಯಿ ದಂಡ ವಿಧಿಸಿದ್ದು, ಪೈಲಟ್ ನನ್ನು ಮೂರು ತಿಂಗಳ ಕಾಲ ಅಮಾನತು ಮಾಡಿರುವುದಾಗಿ ವರದಿಯಾಗಿದೆ.
ನವೆಂಬರ್ ತಿಂಗಳಲ್ಲಿ ನ್ಯೂಯಾರ್ಕ್-ನವದೆಹಲಿ ವಿಮಾನದಲ್ಲಿ ಪ್ರಯಾಣಿಕನೊಬ್ಬ ವೃದ್ಧ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದು, ಈ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿತ್ತು.
ಇನ್ನು ಈ ಘಟನೆಗೆ ಸಂಭಧಿಸಿದಂತೆ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ.