ಶ್ರೀನಗರ, ಜ 20 (DaijiworldNews/DB): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಕಾಶ್ಮೀರದಲ್ಲಿ ಯಾವುದೇ ಭದ್ರತಾ ಸಮಸ್ಯೆ ಇಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾತ್ರೆಗೆ ಬೇಕಾದ ಎಲ್ಲಾ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. ಯಾವುದೇ ಲೋಪವಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು.
ಭಾರತ್ ಜೋಡೋ ಯಾತ್ರೆ ಗುರುವಾರ ಕಾಶ್ಮೀರವನ್ನು ಪ್ರವೇಶಿಸಿತ್ತು. ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭವಾಗಿರುವ ಯಾತ್ರೆ ಜನವರಿ 30ರಂದು ಶ್ರೀನಗರದಲ್ಲಿ ಸಮಾಪನಗೊಳ್ಳಲಿದೆ.