ಬೆಂಗಳೂರು, ಜ. 20 (DaijiworldNews/SM): ಮುಂದಿನ ತಿಂಗಳ 10 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ಫೆಬ್ರವರಿ 17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ ಎಂದು ತಿಳಿಸಿದರು.
ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ಆಧುನಿಕ ಬಸ್ ನಿಲ್ದಾಣಕ್ಕೆ 63 ಕೋಟಿ ರೂ. ಅಂಬೇಡ್ಕರ್ ವಸತಿ ನಿಲಯ ನಿರ್ಮಾಣಕ್ಕೆ 600 ಕೋಟಿ ರೂ. ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ. ಶಿವಮೊಗ್ಗ ಜಿಲ್ಲೆಗಳಲ್ಲಿ ನಾರಾಯಣ ಗುರು ಹೆಸರಿನಲ್ಲಿ ಹಿಂದುಳಿದ ವರ್ಗಗಳ ಶಾಲೆ ನಿರ್ಮಾಣಕ್ಕೆ 72 ಕೋಟಿ ರೂ ನೀಡಲಾಗಿದೆ ಎಂದು ಅವರು ತಿಳಿಸಿದರು.